Sati007 :: kannada Gaalipata minchagi neenu baralu lyrics ::
ಮಿಂಚಾಗಿ ನೀನು ಬರಲು ...
Movie : Gaalipata
Lyrics: Jayant Kaikini
Hadidavaru: Sonu Nigam
ಮಿಂಚಾಗಿ ನೀನು ಬರಲು ನಿಂತಲ್ಲಿಯೇ ಮಳೆಗಾಲ
ಬೆಚ್ಚಗೆ ನೀ ಜೋತೆಗಿರಲು ಕೂತಲ್ಲಿಯೇ ಛಳಿಗಾಲ
ವಿರಹದ ಬೇಗೆ ಸುಡಲು ಎದೆಯಲಿ ಬೆಸಿಗೆಕಾಲ
ಇನ್ನೆಲ್ಲಿ ನನಗೆ ಉಳಿಗಾಲ....
ನಾ ನಿನ್ನ ಕನಸಿಗೆ ಚಂದದಾರನು
ಚಂದ ಬಾಕಿ ನೀಡಲು ಬಂದೆ ಬರುವೆನು
ನಾ ನೇರ ಹೃದಯದ ವರದಿಗಾರನು
ನಿನ್ನ ಕಂಡ ಕ್ಷಣದಲೇ ಮಾತೆ ಮರೆವೆನು
ಕ್ಷಮಿಸು ನೀ ಕಿನ್ನರಿ, ನುಡಿಸಲೇ ನಿನ್ನನು
ಹೇಳಿ ಕೇಳಿ ಮೊದಲೇ ಚೂರು ಪಾಪಿ ನಾನು || ಮಿಂಚಾಗಿ ||
ನಿನ್ನ ಮನದ ಕವಿತೆ ಸಾಲ ಪಡೆವ ನಾನು ಸಾಲಗಾರ
ಕಣ್ಣ ತೆರೆದು ದೋಚಿಕೊಂಡ ನೆನಪುಗಳಿಗೆ ಪಾಲುದಾರ
ನನ್ನದೀ ವೇದನೆ ನಿನಗೆ ನಾ ನೀಡೆನು
ಹೇಳಿ ಕೇಳಿ ಮೊದಲೇ ಚೂರು ಕಳ್ಳ ನಾನು || ಮಿಂಚಾಗಿ ||
No comments:
Post a Comment